
ದಿನಾಂಕ: ೨೪.೦೯.೨೦೨೫ ರಂದು ಆದಿಕವಿ ಶ್ರೀಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದಲ್ಲಿ ಬುಧವಾರ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆಯನ್ನು ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು. ಶಿಕ್ಷಣದೊಂದಿಗೆ ಸೇವೆ ಮತ್ತು ಶಿಕ್ಷಣದೊಂದಿಗೆ ವ್ಯಕ್ತಿತ್ವ ವಿಕಸನ ಎಂಬ ಎರಡು ಧ್ಯೇಯಗಳೊಂದಿಗೆ ಗಾಂಧೀಜಿಯವರ ಜನ್ಮಶತಮಾನೋತ್ಸವ ಸಂದರ್ಭದಲ್ಲಿ 1969 ಸೆ.24ರಂದು ರಾಷ್ಟ್ರೀಯ ಸೇವಾ ಯೋಜನೆ ಅನುಷ್ಠಾನಗೊಂಡಿರುವ ಹಿನ್ನೆಲೆಯಲ್ಲಿ ಎನ್ಎಸ್ಎಸ್ ಸಂಯೋಜನಾಧಿಕಾರಿ ಡಾ. ಜಿ.ಎಸ್.ಬಿರಾದಾರ ಎನ್ಎಸ್ಎಸ್ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಕುಲಪತಿಗಳಾದ ಪ್ರೊ.ಶಿವಾನಂದ ಕೆಳಗಿನಮನಿ ಹಾಗೂ ವಿಶ್ವವಿದ್ಯಾನಿಲಯದ ಎಲ್ಲಾ ಉನ್ನತ ಅಧಿಕಾರಿಗಳು ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.