
ದಿನಾಂಕ: ೨೪.೦೯.೨೦೨೫ ರಂದು ಬೆಂಗಳೂರಿನ ಕರ್ನಾಟಕ ಇತಿಹಾಸ ಅಕಾಡೆಮಿ(ರಿ) ಹಾಗೂ ಆದಿಕವಿ ಶ್ರೀಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಇತಿಹಾಸ ಅಧ್ಯಯನ ವಿಭಾಗದ ಸಂಯುಕ್ತಾಶ್ರಯದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಐತಿಹಾಸಿಕ ಪರಂಪರೆ ಉಳಿಸಿ ವಿಶೇಷ ಉಪನ್ಯಾಸ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ಇತಿಹಾಸ ಅಕಾಡೆಮಿಯ ವತಿಯಿಂದ ಆಯೋಜಿಸಿದ ಐತಿಹಾಸಿಕ ಪರಂಪರೆ ಉಳಿಸಿ ಬಿತ್ತಿ ಪತ್ರಗಳನ್ನು ಬಿಡುಗಡೆ ಮಾಡುವ ಮುಖಾಂತರ ಉದ್ಘಾಟಿಸಿ ಕುಲಪತಿಗಳಾದ ಪ್ರೊ. ಶಿವಾನಂದ ಕೆಳಗಿನಮನಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಇತಿಹಾಸ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಡಾ. ಕೆ.ವೆಂಕಟೇಶ್, ಬೆಂಗಳೂರಿನ ಕರ್ನಾಟಕ ಇತಿಹಾಸ ಅಕಾಡೆಮಿ(ರಿ) ಪ್ರಧಾನ ಕಾರ್ಯದರ್ಶಿಗಳಾದ ರಾಜಶೇಖರ್ ಕೆ.ಎಲ್., ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಅಧ್ಯಯನಾಂಗ ನಿರ್ದೇಶಕರಾದ ಡಾ. ಅಮರೇಶ್ ಯತಗಲ್, ಬೆಂಗಳೂರಿನ ಕರ್ನಾಟಕ ಇತಿಹಾಸ ಅಕಾಡೆಮಿ ಸದ್ಯಸರು ಹಾಗೂ ಶಾಸನತಜ್ಞರು ಧನಪಾಲ್ ಕೆ., ಕುಲಸಚಿವರಾದ ಡಾ.ಎ.ಚನ್ನಪ್ಪ ಕೆ.ಎ.ಎಸ್., ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಡಾ.ಜಿ.ಎಸ್.ಬಿರಾದಾರ, ಡೀನರಾದ ಪ್ರೊ.ಪಾರ್ವತಿ ಸಿ.ಎಸ್., ಪ್ರೊ.ಪಿ.ಭಾಸ್ಕರ್ , ಡಾ.ಲತಾ ಎಂ.ಎಸ್., ಉಪಸ್ಥಿತರಿದ್ದರು.