
ದಿನಾಂಕ: ೨೫.೦೯.೨೦೨೫ ರಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದಲ್ಲಿ ನಾಡಿನ ಹಿರಿಯ ಸಾಹಿತಿ ಹಾಗೂ ಕಾದಂಬರಿಕಾರ, ಚಿಂತಕ, ಪದ್ಮಭೂಷಣ, ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ ಎಸ್.ಎಲ್.ಭೈರಪ್ಪ ಅವರಿಗೆ ಮೌನಾಚರಣೆ ಮಾಡುವುದರ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ.ಎ.ಚನ್ನಪ್ಪ.ಕೆ.ಎ.ಎಸ್., ಮೌಲ್ಯಮಾಪನ ಕುಲಸಚಿವರಾದ ಪ್ರೊ.ಜ್ಯೋತಿ ದಮ್ಮ ಪ್ರಕಾಶ್, ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕರಾದ ಡಾ.ಸುಯಮಿಂದ್ರ ಕುಲಕರ್ಣಿ, ಡೀನರಾದ ಪ್ರೊ.ಪಾರ್ವತಿ ಸಿ.ಎಸ್., ಪ್ರೊ.ಪಿ.ಭಾಸ್ಕರ್, ಡಾ.ಲತಾ ಎಂ.ಎಸ್., ಉಪಕುಲಸಚಿವರಾದ ಡಾ.ಕೆ.ವೆಂಕಟೇಶ್ ಉಪಸ್ಥಿತರಿದ್ದರು.