ಆದಿಕವಿ ಶ್ರೀ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ಒಂದು ದಿನದ ಯುವ ರೆಡ್‌ಕ್ರಾಸ್ ಕಾರ್ಯಾಗಾರ.

ದಿನಾಂಕ: ೦೯.೧೨.೨೦೨೫ ರಂದು ರಾಯಚೂರಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಅಡಿಯಲ್ಲಿ ಬರುವ ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳಿಗೆ ಹಾಗೂ ಯುವ ರೆಡ್‌ಕ್ರಾಸ್ ಕಾರ್ಯಕ್ರಮ ಅಧಿಕಾರಿಗಳಿಗೆ ಹಮ್ಮಿಕೊಂಡ ಒಂದು ದಿನದ ಯುವ ರೆಡ್‌ಕ್ರಾಸ್ ಕಾರ್ಯಾಗಾರವನ್ನು ಯುವ ರೆಡ್‌ಕ್ರಾಸ್ ಸಂಸ್ಥೆ ಸಂಸ್ಥಾಪಕ ಜೀನ್ ಹೆನ್ರಿ ಡುನಾಂಟ್ ರವರ ಭಾವಚಿತ್ರಕ್ಕೆ ಪುಷ್ಟ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ವಾಲ್ಮೀಕಿ ವಿವಿಯ ಕುಲಪತಿಗಳಾದ ಪ್ರೊ.ಶಿವಾನಂದ ಕೆಳಗಿನಮನಿ, ಕುಲಸಚಿವರಾದ ಡಾ.ಎ.ಚನ್ನಪ್ಪ, ಉಪಕುಲಸಚಿವರಾದ ಡಾ.ಕೆ.ವೆಂಕಟೇಶ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕರ್ನಾಟಕ ಶಾಖೆ ಬೆಂಗಳೂರಿನ ಪ್ರಧಾ ಕಾರ್ಯದರ್ಶಿ ಉಮಾಕಾಂತ, ಸಂಯೋಜಕ ಆನಂದ ಉಪಸ್ಥಿತರಿದ್ದರು.