
ದಿನಾಂಕ: ೩೧.೦೮.೨೦೨೫ ರಂದು ವಾಲ್ಮೀಕಿ ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ವಿವಿಧ ಪಂದ್ಯಾವಳಿಗಳನ್ನು ಆಯೋಜಿಸಲಾಗಿತ್ತು. ಎರಡು ದಿನಗಳ ಕಾಲ ನಡೆದ ಕ್ರೀಡೆಗಳಲ್ಲಿ ಪುರುಷ ವಿಭಾಗದ ಕುಲಸಚಿವರ (ಆಡಳಿತ) ತಂಡ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಹಾಗೂ ಸಿ.ಡಿ.ಸಿ (ಕಾಲೇಜು ಅಭಿವೃದ್ಧಿ ಮಂಡಳಿ) ತಂಡ ದ್ವಿತೀಯ ಸ್ಥಾನ ಪಡೆದುಕೊಂಡರೆ, ಥ್ರೋಬಾಲ್ ಪಂದ್ಯಾವಳಿಯಲ್ಲಿ ಮಹಿಳಾ ವಿಭಾಗದ ಉಪಕುಲಸಚಿವರ ತಂಡ ಪ್ರಥಮ ಸ್ಥಾನ ಹಾಗೂ ಹಣಕಾಸು ಅಧಿಕಾರಿಗಳ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು. ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಶಿವಾನಂದ ಕೆಳಗಿನಮನಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿ ಮಾತನಾಡಿದರು. ಕುಲಸಚಿವರಾದ ಡಾ.ಎ.ಚನ್ನಪ್ಪ ಕೆ.ಎ.ಎಸ್., ಮೌಲ್ಯಮಾಪನ ಕುಲಸಚಿವರಾದ ಡಾ. ಜ್ಯೋತಿ ದಮ್ಮ ಪ್ರಕಾಶ್, ಡೀನರಾದ ಡಾ.ಲತಾ ಎಂ.ಎಸ್., ವಿದ್ಯಾರ್ಥಿ ಕಲ್ಯಾಣಾಧಿಕಾರಿ ಜಿ.ಎಸ್.ಬಿರಾದಾರ ಉಪಸ್ಥಿತರು.



